ವರ್ಗ: ಅನುವಾದಗಳು

 • ಪಂಡಿತಪ್ಪಸ್ವಾಮಿಗೆ ಕಾಯುತ್ತಾ ಬೋಟಿ ಬಜಾರಿನಲ್ಲಿ…

  ಸುಂದರ್‌ ಬ್ರಾಂಡ್‌ ಹಲ್ಲುಪುಡಿ ಮಾರುವ ಪಂಡಿತಪ್ಪ ಸ್ವಾಮಿ ನನಗೆ ಇಲ್ಲಿ ಕಾಯಲು ಹೇಳಿದ್ದರು. ಈ ಪಂಡಿತಪ್ಪ ಸ್ವಾಮಿ ಮೈಸೂರಿನವರು ಎಂದು ನನಗೆ ಗೊತ್ತಿರಲಿಲ್ಲ. ಹಾಗೆ ನೋಡಿದರೆ ಇವರ ನೆನಪೂ ನನಗಿರಲಿಲ್ಲ. ಆವತ್ತು ರಾತ್ರಿ ಒಂಬತ್ತು ಗಂಟೆಯ ಹೊತ್ತಿಗೆ ಮೈಸೂರಿನ ರೈಲು ನಿಲ್ದಾಣದ ಬಳಿಯ ಟ್ರಾಫಿಕ್‌ ಸಿಗ್ನಲ್‌ ಲೈಟು ಯಾಕೋ ಇದ್ದಕ್ಕಿದಂತೆ ಕೆಟ್ಟು ಹೋಗಿರದಿದ್ದರೆ ಇವರನ್ನು ಬಹುಶಃ ಈ ಜೀವಮಾನದಲ್ಲಿ ನಾನು ನೋಡುತ್ತಲೂ ಇರಲಿಲ್ಲ.

  ಮತ್ತಷ್ಟು ಓದು: ಪಂಡಿತಪ್ಪಸ್ವಾಮಿಗೆ ಕಾಯುತ್ತಾ ಬೋಟಿ ಬಜಾರಿನಲ್ಲಿ…
 • ಗುಮ್ ನಾಮ್ ಬಾದಶಾನ ಗುಡ್ಡದಲ್ಲಿ

  ನಾನಾದರೋ ಮೊನ್ನೆ ಜನವರಿ 16ಕ್ಕೆ ಸೂಫಿ ಸಂತರು ಕುಂತ ಈ ಗುಡ್ಡಕ್ಕೆ ಬಂದಿದ್ದೆ. ಈ ಗುಡ್ಡದಲ್ಲಿ ಸುಮಾರು ನೂರು ವರ್ಷಗಳ ಹಿಂದೆ ವಾಸವಾ ಗಿದ್ದ ಗುಮ್‌ನಾಮ್‌ ಬಾದಶಾ ಎಂಬ ಸೂಫಿ ಸಂತನ ಗೋರಿಯಿತ್ತು. ಇತ್ತೀಚೆಗೆ 25 ವರ್ಷಗಳ ಹಿಂದೆಯ ವರೆಗೆ ಮೈಸೂರಿನಿಂದ ಬೆಂಗಳೂರಿಗೆ ಹೊರಡುತ್ತಿದ್ದ ಎಲ್ಲ ರೈಲು ಬಂಡಿ ಗಳೂ ಈ ಸೂಫಿ ಸಂತನ ಗುಡ್ಡದ ಬಳಿ ನಿಲ್ಲುತ್ತಿದ್ದವಂತೆ. ನಿಂತು ಅದರಿಂದ ರೈಲಿನ ಚಾಲಕ ಇಳಿದು ಗುಡ್ಡ ಹತ್ತಿ ಈ ಸಂತನ ಸಮಾಧಿಯ ಬಳಿ ಚಿರಾಗ್‌ ಎಂಬ ದೀಪ ಹೊತ್ತಿಸಿ ಆಮೇಲೆ ರೈಲುಬಂಡಿ ಹೊರಡುತ್ತಿತ್ತಂತೆ.

  ಮತ್ತಷ್ಟು ಓದು: ಗುಮ್ ನಾಮ್ ಬಾದಶಾನ ಗುಡ್ಡದಲ್ಲಿ
 • ಒಂಟಿ ಸಲಗ ಮತ್ತು ಒಬ್ಬರು ಸ್ತ್ರೀ

  ಆ ಒಂಟಿ ಸಲಗ ನನ್ನನ್ನು ಹೂವಿನಂತೆ ಆಕಾಶದಲ್ಲಿ ಹತ್ತು ಅಡಿ ಎತ್ತರಕ್ಕೆ ಎಸೆಯಿತು. ಚೆಂಡಿನಂತೆ ಕಾಡಿನೊಳಕ್ಕೆ ಅಷ್ಟು ದೂರ ಕಾಲಿನಿಂದ ದೂಡಿತು, ಸೊಂಡಿಲಿನಿಂದ ಎತ್ತಿ ದಂತಗಳ ಮೇಲೆ ಕೂರಿಸಿತು, ನೆಲದಲ್ಲಿ ಮಲಗಿಸಿ ದೂರದಿಂದ ನೋಡಿತು… ಒಟ್ಟಿನಲ್ಲಿ ಈಗ ಯೋಚಿಸಿದರೆ ಆ ಒಂಟಿಸಲಗ ನನ್ನನ್ನು ಓರ್ವ ಪ್ರೇಮಿಯಂತೆ ಒಂದೂವರೆ ತಾಸುಗಳ ಹೊತ್ತು ಕಾಡಿಸಿತ್ತು’.

  ಮತ್ತಷ್ಟು ಓದು: ಒಂಟಿ ಸಲಗ ಮತ್ತು ಒಬ್ಬರು ಸ್ತ್ರೀ