ರೂಮಿ ಕವಿಯ ಹನ್ನೆರಡು ಪುಟ್ಟ ಕವಿತೆಗಳು

 

 

rumi6.jpg

-೧-

ನೀರೊಳಗೆ ತಿರುಗುತ್ತಿದೆ ನೀರ ಗಾಲಿ,

ತಾರೆ ತಿರುಗುತ್ತಿದೆ ಚಂದ್ರನೊಡನೆ.

ಚಕಿತ ನಾವು ಈ ಇರುಳಲ್ಲಿ,ಅದು ಹೇಗೆ

 ಇಷ್ಟೊಂದು ಬೆಳಕು ಇಲ್ಲಿ !

ಓದನ್ನು ಮುಂದುವರೆಸಿ

Advertisements

ಇನ್ನೊಂದು ಬಹಳ ಹಳೆಯ ಕವಿತೆ

ಅವಳು

avalu.jpg

ಚಂದವಿದ್ದಳು ಗೆಳೆಯ ಅವಳು

ಒಳ್ಳೆ ಮಜಬೂತು ಕುದುರೆ.

ಹಾರಂಗಿ ಅಣೆಕಟ್ಟು ಕಟ್ಟಿಟ್ಟ ನೀರು

ಬಿಟ್ಟಾಗ ನಗುವ ನಕ್ಷತ್ರ ಮೀನು.

ಅವಳು ಕೂದಲು ಬಿಚ್ಚಿಟ್ಟು ತುಟಿಯಲ್ಲಿ

ಕಚ್ಚಿ ಹೇರುಪಿನ್ನು, ನಗುವ ಹಾಗೆ

ಗಲ್ಲದಲ್ಲೊಂದು ಗುಳಿಯಿತ್ತು ಗೆಳೆಯ,

ತುಂಬು ಕೊರಳಿನ ತುಂಬ ಕಾಡು ಹಾಡು.

ಅವಳ ತಟ್ಟನೆಯ ತಿರುವು ತಿರುವುತ್ತ

ಹರಿವ ಕಪ್ಪು ಟಾರಿನ ದಾರಿ ತಗ್ಗು ಕೆಳಗೆ

ಅಲ್ಲಿ ಏಲಕ್ಕಿ ಮಲೆ ಕೆಂಪು ಕಾಫಿಯ ತೋಟ

ಹಸಿರು ಗಾಳಿಗೆ ಉಲಿವ ಬೇಲಿಯೊಳಗೆ

ಚೀಲ ಬುತ್ತಿಯ ತೋಳೆ ಬರಿ ಕಿತ್ತಳೆ.

ಪುಟ್ಟ ಮೂರು ರೂಮಿ ಕವಿತೆಗಳು

 

[ಮೌಲಾನಾ ಜಲಾಲುದ್ದೀನ್ ರೂಮಿ ಬದುಕಿದ್ದರೆ ಅವರಿಗೆ ನಾಳೆ ಭಾನುವಾರಕ್ಕೆ ಎಂಟುನೂರು ವರ್ಷಗಳಾಗುತ್ತಿತ್ತು.ರೂಮಿಯ ಕುರಿತು, ಅವರ ಹುಟ್ಟೂರಿನ ಕುರಿತು, ಈಗ ಆ ಊರು ಹೇಗಿದೆ ಎಂಬುದರ ಕುರಿತು ನೀವು ಬಿ.ಬಿ.ಸಿ ಯ ಈ ತಾಣವನ್ನು ನೋಡಬಹುದು .]

ಓದನ್ನು ಮುಂದುವರೆಸಿ

ಬಾಲ್ಯ ಕಾಲದ ಒಂದು ಕವಿತೆ

ಮತ್ತೇ ಬರುವೆನು ಹೆಣ್ಣೇ..

ಮತ್ತೆ ಬರುವೆನು ಹೆಣ್ಣೆ ಮರಳಿ ನಿನ್ನಲ್ಲಿಗೆನಿನ್ನ ಬೆಳ್ಳಿ ಉಡಿಪಟ್ಟ ಎದೆ ತುಂಬಿತುಳುಕುವ ಕುಪ್ಪಾಯ, ಮುಂಡು ತುಣಿಯೊಳಗುಕ್ಕುವ ಕಾವ್ಯಕ್ಕೆ ರೇಕು ತುಂಬಿಸಲಿಕ್ಕೆ. ಓದನ್ನು ಮುಂದುವರೆಸಿ

ಪುಷ್ಕಿನ್ ನ ಇನ್ನೊಂದು ಕವಿತೆ

ನನ್ನ ತೋಳುಗಳಲ್ಲಿ

hatbeaut02.jpg

 

ನನ್ನ ತೆರೆದ ತೋಳುಗಳಲ್ಲಿ ನಿನ್ನ ಎಳೆ ಚೆಲುವು

ಸೆರೆಯಾಗಿದೆ ಓ ದೇವತೆಯೇ…

 

ನನ್ನ ತುಟಿಯ ನಡುವಿಂದ ಮುತ್ತುಗಳ ನಡುನಡುವೆ

ಪ್ರೀತಿಮಾತುಗಳು ಸೆಲೆಯೊಡೆಯುತ್ತಿವೆ.

ನನ್ನ ಬಿಗಿ ಅಪ್ಪುಗೆಯಿಂದ  ಮಾತಿಲ್ಲದೆಯೆ

ನಿನ್ನ ತೆಳ್ಳಗಿನ ದೇಹ ಸರಿಯುತ್ತಿದೆ ದೂರ

ಸಂಶಯದೊಂದು ಸಣ್ಣ ನಡುವಿನ ಹುಡುಗೀ..

ನೀ ಕೊಂಕು ಮಾತಾಡುತಿರುವೆ.

ಮೋಸದ ನೋವಿನ ಸಾಲುಮಾತುಗಳು ನೆನಪಾಗುತಿದೆ

ನಿನಗೆ. ಸುಮ್ಮನೆ ಕೇಳಿಸಿಕೊಳ್ಳುತಿರುವೆ

ಏನೂ ಕೇಳಿಸದೆಯೇ..

ಶಪಿಸುತ್ತಿರುವೆ ನನ್ನ ಹುಮ್ಮಸ್ಸಿಗೆ ನಾನೇ

ನನ್ನ ನಯದ ಲಲ್ಲೆಯಾಟಗಳಿಗೆ,

ಯೌವನಕ್ಕೆ, ನಿತ್ಯ ಬೇಟಗಳಿಗೆ,

ಹೂತೋಟದ ಸದ್ದಿಲ್ಲದ ಆಟಗಳಿಗೆ

ಪ್ರೇಮದ ಹೆಸರಿಲ್ಲದ ಪಿಸುಮಾತಿನ ಹೇಳಿಕೆಗಳಿಗೆ.pushkin.jpg

ಶಪಿಸುತ್ತಿರುವೆ ಕವಿತೆಗಳ ಮಾಂತ್ರಿಕ ಮೋಡಿಗಳಿಗೆ,

ಅರಿಯದ ಸಣ್ಣ ಹುಡುಗಿಯರ ಸ್ಪರ್ಶಗಳಿಗೆ,

ಅವರ ಕಣ್ಣೀರಿಗೆ, ಕಾಲ ಮೀರಿದ  ವಿಷಾದಗಳಿಗೆ.

ಒಂದು ರೇಡಿಯೋ ಕವಿತೆ

ಆಗ ರೇಡಿಯೋ ಇರಲಿಲ್ಲ . ಅದರ ದೊಡ್ಡ ಬೀಟೆಯ ಮರದ ಪೆಟ್ಟಿಗೆ ಮಾತ್ರ ಉಳಿದಿತ್ತು.

ಒಳಗೆ ಅಪ್ಪನ ಬೀಡಿ ಪೊಟ್ಟಣ, ಅರಬಿ ಪುಸ್ತಕ, ಕೆಮ್ಮಿನ ಔಷದಿ,

ಮೊಲದ ಬೇಟೆಗೆ ತಂದು ಇಟ್ಟಿದ್ದ ನಾಡಕೋವಿಯ ತೋಟೆ,

ಅವರ ಕನ್ನಡಕ,ಅಂಗಡಿಯ ಸಾಲದ ಪುಸ್ತಕ, ನಮಗೆ ಕದ್ದು ಮುಚ್ಚಿ

ಮುದ್ದು ಮಾಡಲು ತಂದಿಟ್ಟಿದ್ದ ಮಿಠಾಯಿ  ಮತ್ತು ಅವರ ಮೂಗು ಒರೆಸಿಟ್ಟ ಕರ್ಚೀಪು.

ನಮ್ಮಷ್ಟಕ್ಕೆ ನಮಗೆ ಯಾವುದೂ ಎಟುಕುತ್ತಿರಲಿಲ್ಲ. . . . .

ಮತ್ತು ರೇಡಿಯೋ ಅಂದರೆ ಏನು ಅಂತ ಗೊತ್ತಿರಲಿಲ್ಲ.

ಈಗ ರೇಡಿಯೋ ಕೈಗೆಟುಕುತ್ತಿದೆ. ಅಪ್ಪ ನೋಡಲು ಸಿಗುತ್ತಿಲ್ಲ ಓದನ್ನು ಮುಂದುವರೆಸಿ

[ಒಂದು ಹಳೆಯ ಕವಿತೆ]

ಹುದುಗಿಸಿಡು ಇದನು ಇಲ್ಲೆ ಎಲ್ಲಾದರೂ....

 

hudugisidu.jpg

ಹುದುಗಿಸಿಡು ಇದನು ಇಲ್ಲೆ ಎಲ್ಲಾದರೂ ಎಲೆಯ ಮರೆಯಲ್ಲಿಡು
ಅದನು ನನಗೇ ತಿರುಗಿಸಿಕೊಡು.
 
 ನಿದ್ದೆಯಿಂದೆದ್ದು ಆಕಳಿಸುತ ನಿಂತ ಕಾಮದೇವತೆ
 ಮಗು ನೀನು. ಎಚ್ಚರಿಸಿ ಮೆಲ್ಲಗೇ ಕಾಲು ಕೆದರಿ
 ಕಾಮಿಸಲು ಕರೆದೊಯ್ಯಬಂದೆ ನಾನು
 ಯಾಕಳುವುದು ಸಂಜೆ ನೀನು? ಓದನ್ನು ಮುಂದುವರೆಸಿ